ರಾಜಮಾತೆ ಜೊತೆ ಸಿಎಂ ಮಾತುಕತೆ: ಜಂಬೂ ಸವಾರಿ ಪುಷ್ಪಾರ್ಚನೆಗೆ ಯದುವೀರ್‌ಗೆ ಆಹ್ವಾನ

ಮೈಸೂರು ದಸರಾಗೆ ಇಂದು ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ದಸರಾ ಹಿನ್ನೆಲೆಯಲ್ಲಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಸಿಎಂ ಯಡಿಯೂರಪ್ಪ ಔಪಚಾರಿಕ ಮಾತುಕತೆ ನಡೆಸಿದ್ದಾರೆ. ದಸರಾ ಮಹೋತ್ಸವಕ್ಕೆ ರಾಜ ಕುಟುಂಬದ ಕೊಡುಗೆಯನ್ನು ಸ್ಮರಿಸಿದರು. ಮೈಸೂರು: ಮೈಸೂರು ದಸರಾ 2019 ಮಹೋತ್ಸವ ಹಿನ್ನೆಲೆಯಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅರಮನೆಯಲ್ಲಿ ಭೇಟಿ ಮಾಡಿ ಔಪಾಚಾರಿಕವಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ , ದಸರಾ ಮಹೋತ್ಸವದಲ್ಲಿ ರಾಜಮನೆತನದ ಕೊಡುಗೆ ಅಪಾರವಾಗಿದ್ದು , ರಾಜಮಾತೆ ಪ್ರಮೋದಾದೇವಿ ಅವರ ಜೊತೆ ಸಾಕಷ್ಟು ವಿಚಾರಗಳನ್ನು ಮಾತನಾಡಿದೆ ಎಂದರು. ಜಂಬೂಸವಾರಿ ದಿವಸ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ವೇಳೆ " ಯ ದುವೀರ್ ಒಡೆಯರ್" ಅವರನ್ನು ಕಳುಹಿಸಬೇಕು ಎಂದು ರಾಜಮಾತೆಯವರಲ್ಲಿ ಕೋರಿರುವುದಾಗಿ ಯಡಿಯೂರಪ್ಪ ತಿಳಿಸಿದರು. ಈ ಬಾರಿ ದಸರಾ ಮಹೋತ್ಸವ ತುಂಬಾ ಉತ್ತಮ ರೀತಿಯಲ್ಲಿ ಮೂಡಿಬಂದಿದ್ದು , ಫಲಪುಷ್ಪ ಪ್ರದರ್ಶನ ಹಾಗೂ ದೀಪಾಲಂಕಾರ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತವೆ. ಅದೇ ರೀತಿ ಇಲ್ಲಿನ ಸಚಿವರು , ಶಾಸಕರು ಅಧಿಕಾರಿಗಳ ಜೊತೆ ಉತ್ತಮ ಬಾಂಧವ್ಯದಿಂದ ಕೆಲಸ ಮಾಡಿರುವುದು ಕಂಡು ಬರುತ್ತದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಹದೇಶ್ವರ ಬೆಟ...