ಅನರ್ಹರಿಗೆ ಬಿಗ್ ರಿಲೀಫ್, ಕರ್ನಾಟಕ ಉಪಚುನಾವಣೆಗೆ ಸುಪ್ರೀಂ ತಡೆ...
- ಅನರ್ಹ ಶಾಸಕರಿಗೆ ಬಿಗ್ ರಿಲೀಫ್/ ಉಪಚುನಾವಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್/ ಪ್ರಕರಣದ ಸಂಪೂರ್ಣ ವಿಚಾರಣೆ ಬಳಿಕವೇ ಉಪಚುನಾವಣೆ….
ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಅಕ್ಟೋಬರ್ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿತು ಎನ್ನಲಾಗಿದೆ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ.
ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ