ಸಂಚಾರ ನಿಯಮ ಉಲ್ಲಂಘನೆ ದುಬಾರಿ ದಂಡಕ್ಕೆ ರಾಜ್ಯ ಸರಕಾರ ಬ್ರೇಕ್‌, ದಂಡ ಮೊತ್ತ ಇಳಿಕೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿದ್ದ ಭಾರಿ ಮೊತ್ತದ ದಂಡದ ಬಗ್ಗೆ 

ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ರಾಜ್ಯ ಸರಕಾರ ದಂಡದ 

ಮೊತ್ತವನ್ನು ಇಳಿಕೆ ಮಾಡಿದೆ.


ಸಂಚಾರ ನಿಯಮ ಉಲ್ಲಂಘನೆ :

ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿದ್ದ ಸಂಚಾರ ನಿಯಮ ಉಲ್ಲಂಘನೆಯ ದುಬಾರಿ ದಂಡಕ್ಕೆ ರಾಜ್ಯ ಸರಕಾರ ಬ್ರೇಕ್‌ ಹಾಕಿದೆ.

ಸಂಚಾರ ನಿಯಮ ಉಲ್ಲಂಘನೆಯ ದಂಡ ಮೊತ್ತವನ್ನು ಇಳಿಕೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹೆಲ್ಮೆಟ್ ಧರಿಸದಿದ್ರೆ 500 ರೂ ದಂಡ. ಮದ್ಯ ಸೇವಿಸಿ ವಾಹನ ಚಲಾಯಿಸಿದರೆ 10 ಸಾವಿರ ರೂ. ದಂಡ (ಇದನ್ನು ಹಾಗೆ ಉಳಿಸಿಕೊಳ್ಳಲಾಗಿದೆ)

ಲೈಸೆನ್ಸ್‌ ಇಲ್ಲದಿದ್ದರೆ ಈ ಮೊದಲು 5 ಸಾವಿರ ರೂ. ದಂಡ ವಿಧಿಸಲಾಗಿತ್ತು. ಅದನ್ನೀಗ 1 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ.

ಸೆಪ್ಟೆಂಬರ್‌ 3ರಿಂದ ಮೋಟಾರು ವಾಹನ ಕಾಯಿದೆಯನ್ವಯ ದುಬಾರಿ ದಂಡವನ್ನು ವಿಧಿಸಲಾಗುತ್ತಿತ್ತು. ಇದಕ್ಕೆ ಸಾರ್ವಜನಿಕರಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಕೆಲವು ರಾಜ್ಯಗಳಲ್ಲಿ ದಂಡದ ಮೊತ್ತವನ್ನು ಇಳಿಕೆ ಮಾಡಿ ಆದೇಶ ನೀಡಲಾಗಿತ್ತು.

ಈಗ ಅದೇ ಮಾದರಿಯಲ್ಲಿ ಕರ್ನಾಟಕ ಸರಕಾರ ಕೂಡ ದಂಡದ ಮೊತ್ತವನ್ನು ಇಳಿಕೆ ಮಾಡಿ ಅಧಿಸೂಚನೆ ಹೊರಡಿಸಿದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Tata Sky DTH: ವೆಚ್ಚ ಕಡಿತಕ್ಕೆ ಚಾನಲ್‌ಗೆ ಕತ್ತರಿ ಹಾಕಲಿದೆ ಟಾಟಾ ಸ್ಕೈ!

Jio Call Charge: ಏರ್‌ಟೆಲ್, ವೊಡಾಫೋನ್‌, ಐಡಿಯಾಗೆ ಎದಿರೇಟು!

WhatsApp Update: ಬರಲಿದೆ ಹೊಸ ಹೊಸ ಫೀಚರ್! ಏನಿದೆ ಗೊತ್ತಾ?