ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
(ಹೊಸದಿಲ್ಲಿ: ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150 ಜನ್ಮದಿನೋತ್ಸವ ಮತ್ತು ಮಾಜಿ ಪ್ರಧಾನಿ ಲಾಲ್
ಬಹದ್ದೂರ್ ಶಾಸ್ತ್ರಿ ಅವರ 115ನೇ ಜನ್ಮದಿನ ಆಚರಿಸಲಾಗುತ್ತಿದೆ. ಈಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ದೇಶದ ಗಣ್ಯರು ದೆಹಲಿಯ ರಾಜ್‌ಘಾಟ್‌ನಲ್ಲಿ ಗಾಂಧಿ ಸ್ಮಾರಕ ಹಾಗೂ ದೆಹಲಿಯ ವಿಜಯ್‌ಘಾಟ್‌ನಲ್ಲಿರುವ ಶಾಸ್ತ್ರಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ದಾರೆ.)
ನವದೆಹಲಿ: ಮಹಾತ್ಮ ಗಾಂಧಿಯವರ 150 ನೇ ಜನ್ಮದಿನೋತ್ಮವ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ರಾಜಘಾಟ್ನಲ್ಲಿ ಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಮೂಲಕ ಗೌರವ ಸಲ್ಲಿಸಿದರು.
ಮನುಕುಲಕ್ಕೆ ಮಹಾತ್ಮ ಗಾಂಧಿಯವರ ಕೊಡುಗೆ ನೆನೆದ ಮೋದಿ, ಗಾಂಧಿಜಿಯವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ಶ್ರಮವಹಿಸಿ ದುಡಿಯುವುತ್ತೇವೆ. ಮಹಾತ್ಮರು ಹಾಕಿಕೊಟ್ಟಿರುವ ದಾರಿಯಲ್ಲೇ ಸಾಗುತ್ತೇವೆ ಎಂದು ಟ್ವಿಟರ್ ಮೂಲಕ ತಿಳಿಸಿದರು. ನಂತರ ವಿಜಯ್ ಘಾಟ್ಗೆ ತೆರಳಿ ಭಾರತ ಮಾಜಿ ಪ್ರಧಾನ ಮಂತ್ರಿಗಳಾದ ಲಾಲ್ ಬಹದ್ಧೂರ್ ಶಾಸ್ತ್ರಿಯವರಿಗೆ ಪುಷ್ಪನಮನ ಮೂಲಕ ಗೌರವ ಸಲ್ಲಿಸಿದರು.
ಭಾರತೀಯ ಜನತಾ ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ, ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ನಾಯಕರು ರಾಜಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ